ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂದು ಗಂಟೆಗಳ ಕಾಲ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದ್ದು, 13 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಎನ್‌ಕೌಂಟರ್ ನಡೆದಿದೆ.
ಇತ್ತೀಚಿನ ವರ್ಷಗಳಲ್ಲಿ ಇದು ಅತ್ಯಂತ ದೊಡ್ಡ ಭದ್ರತಾ ಕಾರ್ಯಾಚರಣೆಗಳಲ್ಲಿ ಒಂದಾಗಿದೆ ಎಂದು ಪರಿಗಣಿಸಲಾಗಿದೆ. ಬುಧವಾರ ಬೆಳಗ್ಗೆಯ ಹೊತ್ತಿಗೆ ಒಟ್ಟು 13 ಮೃತದೇಹಗಳನ್ನು ಸಿಬ್ಬಂದಿಗಳು ಹೊರತೆಗೆದಿದ್ದಾರೆ.
ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.