ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮೊರೆನಾದಲ್ಲಿರುವ ಬಾಲಾಪರಾಧಿಗಳ ಮನೆಯಿಂದ 8 ಮಂದಿ ಬಾಲಾಪರಾಧಿಗಳು ಪರಾರಿಯಾಗಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿರುವ 8 ಬಾಲಾಪರಾಧಿಗಳು ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ನೈನಗರ್ ರಸ್ತೆಯಲ್ಲಿರುವ ಜುವೆನೈಲ್ ಹೋಮ್ನಲ್ಲಿ ಈ ಘಟನೆ ನಡೆದಿದೆ.
ಅತ್ಯಾಚಾರ ಮತ್ತು ಕೊಲೆಯ ಗಂಭೀರ ಆರೋಪಗಳನ್ನು ಎದುರಿಸುತ್ತಿರುವವರು ಸೇರಿದಂತೆ 12 ಬಾಲಾಪರಾಧಿಗಳ ಪೈಕಿ ಎಂಟು ಮಂದಿ ಭಾನುವಾರ ಸಂಜೆ 7 ಗಂಟೆಗೆ ಸ್ನಾನಗೃಹದ ಗೋಡೆಯನ್ನು ಒಡೆದು ಪರಾರಿಯಾಗಿದ್ದಾರೆ ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಸಿಂಗ್ ಹೇಳಿದ್ದಾರೆ.
ಬಾಲಾಪರಾಧಿ ಗೃಹದಲ್ಲಿದ್ದ ವಿಶೇಷ ಸಶಸ್ತ್ರ ಪಡೆಯ ಸಿಬ್ಬಂದಿ ರಾತ್ರಿ 8 ಗಂಟೆ ಸುಮಾರಿಗೆ ಕೊತ್ವಾಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಬಾಲಾಪರಾಧಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ತಪ್ಪಿಸಿಕೊಂಡ ಯುವಕರು ಮೊರೆನಾ, ಭಿಂಡ್ ಮತ್ತು ಶಿಯೋಪುರ್ ಜಿಲ್ಲೆಗಳಿಂದ ಬಂದವರು ಎಂದು ಎಸ್ಪಿ ತಿಳಿಸಿದ್ದಾರೆ.