ಮೆಕ್ಸಿಕೋದ ನೈಟ್‌ಕ್ಲಬ್ ಮೇಲೆ ನಿಲ್ಲದ ಗುಂಡಿನ ದಾಳಿಗೆ ಎಂಟು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಅಮೆರಿಕದ ಮೆಕ್ಸಿಕೋ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದ್ದು, ನೈಟ್ ಕ್ಲಬ್‌ನಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿಗೆ ಎಂಟು ಮಂದಿ ಮೃತಪಟ್ಟಿದ್ದಾರೆ.

ದಾಳಿಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಭಾರೀ ಶಸ್ತ್ರಸಜ್ಜಿತ ವ್ಯಕ್ತಿಗಳಿಬ್ಬರು ಎರಡು ವಾಹನದಲ್ಲಿ ಬಾರ್‌ಗೆ ಬಂದಿದ್ದರು. ಏಕಾಏಕಿ ಬಾರ್‌ಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದ್ದಾರೆ.

ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇನ್ನಿಬ್ಬರು ಮೃತಪಟ್ಟಿದ್ದಾರೆ. ಇನ್ನೂ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರಲ್ಲಿ ಕ್ಲಬ್‌ನಲ್ಲಿ ಹಾಡುತ್ತಿದ್ದ ಹಾಡುಗಾರರು, ಉದ್ಯೋಗಿಗಳು ಮತ್ತು ಗ್ರಾಹಕರು ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!