ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಒಡಿಶಾದ ಕಿಯೋಂಜಾರ್ ಜಿಲ್ಲೆಯ ನ್ಯಾಷನಲ್ ಹೈವೇ-೨೦ರಲ್ಲಿ ಪ್ರಯಾಣಿಕರಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿಯಾಗಿದೆ.
ವ್ಯಾನ್‌ನಲ್ಲಿ ಗಂಜಾಂನ ದಿಗಪಹಂಡಿ ನಿವಾಸಿಗಳು ಮಾ ತಾರಿಣಿ ದೇಗುಲಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಲಿಜೋಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.