March 22, 2026
Sunday, March 22, 2026
spot_img

ಕುಡಿಯುವ ಹಾಲಿಗೆ ಕಲಬೆರಕೆ ಮಾಡುತ್ತಿದ್ದ ಎಂಟು ಮಂದಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಲಾರದಲ್ಲಿ ಹಾಲಿನ ಕಲಬೆರಕೆ ದಂಧೆ ಮಾಡಿ ಜಿಲ್ಲಾಡಳಿತದ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಕೋಲಾರ ಜಿಲ್ಲೆಗೆ ಹೊಂದಿಕೊಂಡಂತೆ ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಿವೆ. ಹೀಗಾಗಿ ಅಲ್ಲಿನ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಖಾಸಗಿ ಡೈರಿಗಳು ಕೋಲಾರ ಜಿಲ್ಲೆಯಲ್ಲಿ ಕಲಬೆರಕೆ ಹಾಲಿನ ಅಡ್ಡೆಗಳನ್ನ ನಿರ್ಮಾಣ ಮಾಡಿಕೊಂಡು ಇಲ್ಲಿ ಕಲಬೆರಕೆ ಹಾಲು ಮಾಡುತ್ತಿದ್ದರು.

ಈ ಬಗ್ಗೆ ತಿಳಿಯುತ್ತಿದ್ದಂತೆಯೇ ಕೋಲಾರ ಡಿಸಿ ಏಕಕಾಲಕ್ಕೆ 32 ಸ್ಥಳಗಳಲ್ಲಿ ದಾಳಿ ಮಾಡಿ ಸುಮಾರು 42 ಹಾಲಿನ ಮಾದರಿಗಳನ್ನು ಸಂಗ್ರಹ ಮಾಡಿದ್ದರು. ದಂಧೆಯಲ್ಲಿ ತೊಡಗಿದ್ದ ಆಂಧ್ರ ಮೂಲದ 8 ಜನರನ್ನು ಬಂಧಿಸಲಾಗಿದೆ. ಸದ್ಯ ಜಿಲ್ಲೆಯಲ್ಲಿ ಕಲಬೆರಕೆ ಹಾಲಿನ ವಿರುದ್ಧ ಅಧಿಕಾರಿಗಳು ಸಮರ ಸಾರಿದ್ದು, ಎರಡು ಬಾರಿ ದೊಡ್ಡ ಮಟ್ಟದಲ್ಲಿ ಕಲಬೆರಕೆ ಹಾಲಿನ ವಿರುದ್ಧ ದಾಳಿ ಮಾಡಿ ಈಗಾಗಲೇ ಅವುಗಳಿಗೆ ಕಡಿವಾಣ ಹಾಕಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !