ಹೊಸ ದಿಗಂತ ವರದಿ, ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕಾಣೆಯಾಗಿರುವವರ ತೀವ್ರ ಹುಡುಕಾಟ
ಘಟನೆ ಮಾಹಿತಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿ ಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.



