Sunday, December 10, 2023

Latest Posts

ಸರಣಿ ಭೂಕಂಪಕ್ಕೆ ಆಫ್ಘನ್‌ ತತ್ತರ: 320ಜನರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಫ್ಘಾನಿಸ್ತಾನದಲ್ಲಿ ಸತತ ಏಳು ಬಾರಿ ಸಂಭವಿಸಿದ ಭೂಕಂಪದಲ್ಲಿ 320 ಜನರು ಸಾವನ್ನಪ್ಪಿದ್ದು, 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವಿಶ್ವಸಂಸ್ಥೆ ದೃಢಪಡಿಸಿದೆ. ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ ಶನಿವಾರ ಅರ್ಧ ಗಂಟೆಯೊಳಗೆ ಮೂರು ಪ್ರಬಲ ಭೂಕಂಪಗಳು ಸಂಭವಿಸಿರುವುದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ. ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಶನಿವಾರ ಸಂಭವಿಸಿದ 6.3 ತೀವ್ರತೆಯ ಭೂಕಂಪದಲ್ಲಿ ಸಾವಿನ ಸಂಖ್ಯೆ 120ಕ್ಕೆ ತಲುಪಿದೆ. ದುರಂತದಲ್ಲಿ 1000ಕ್ಕೂ ಹೆಚ್ಚು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೂಕಂಪದ ಕೇಂದ್ರಬಿಂದು ಹೆರಾತ್ ನಗರದ ವಾಯುವ್ಯಕ್ಕೆ 40 ಕಿಮೀ ದೂರದಲ್ಲಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕೇವಲ ಕೆಲವೇ ಗಂಟೆಗಳಲ್ಲಿ ಸತತ ಭೂಕಂಪಗಳಿಂದ ಆಫ್ಘನ್‌ ಜನ ತತ್ತರಿಸಿದ್ದು, ನಿವಾಸಿಗಳು ಕಟ್ಟಡಗಳನ್ನು ಬಿಟ್ಟು ಹೊರಗೆ ಓಡಿದ್ದಾರೆ.

ರಿಕ್ಟರ್ ಮಾಪಕದಲ್ಲಿ 4.3 ಮತ್ತು 6.3ರ ನಡುವೆ ಎಂಟು ಭೂಕಂಪಗಳು ಸಂಭವಿಸಿವೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.  ಸರ್ವೆ ಪ್ರಕಾರ, ಪ್ರಮುಖ ಭೂಕಂಪದ ನಂತರ ಐದು ಭೂಕಂಪಗಳು ರಿಕ್ಟರ್ ಮಾಪಕದಲ್ಲಿ 5.5, 4.7, 6.3, 5.9 ಮತ್ತು 4.6 ರಷ್ಟು ದಾಖಲಾಗಿದೆ. ಶನಿವಾರ ಬೆಳಗ್ಗೆ 11:00 ಗಂಟೆಯ ಸುಮಾರಿಗೆ ಶುರುವಾದ ಕಂಪನಗಳು ಭಾರೀ ನಷ್ಟವನ್ನುಂಟು ಮಾಡಿವೆ. ಕೆಲವು ಪ್ರದೇಶಗಳು ಸಂಪೂರ್ಣವಾಗಿ ಅವಶೇಷಗಳಿಂದ ತುಂಬಿದ್ದು, ಕಣ್ಣಾಯಿಸಿದಷ್ಟೂ ಕುಸಿದ ಕಟ್ಟಡಗಳೇ ಕಾಣುತ್ತವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!