July 11, 2026
Saturday, July 11, 2026
spot_img

ಎಂಟನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌: ಶಿಕ್ಷಕಿಯರು, ಅಡುಗೆ ಸಹಾಯಕಿ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿಕ್ಷಕಿ ಬೈದರು ಎಂದು ಮನನೊಂದು ಎಂಟನೇ ತರಗತಿ ವಿದ್ಯಾರ್ಥಿನಿ ಸೂಸೈಡ್‌ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಅಡುಗೆ ಸಹಾಯಕಿ ಹಾಗೂ ಮೂವರು ಶಿಕ್ಷಕಿಯರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆನೇಕಲ್‌ನ ಶಾಲೆಯೊಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮನುಶ್ರೀಗೆ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸೂರ್ಯನಗರ ಠಾಣೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಾಯುವ ನಿರ್ಧಾರಕ್ಕೂ ಮುನ್ನ ಮಧುಶ್ರೀ ಮಾನಸಿಕ ಕಿರುಕುಳದ ಬಗ್ಗೆ ಲೆಟರ್‌ ಒಂದನ್ನು ಬರೆದು ಇಟ್ಟಿದ್ದಳು. ಇದನ್ನು ಗ್ರಾಮಪಂಚಾಯತಿಯ ಪಿಡಿಒಗೆ ನೀಡಬೇಕು ಎಂದು ನಿರ್ಧರಿಸಿದ್ದಳು. ಈ ರೀತಿ ಲೆಟರ್‌ ಬರೆದಿರುವ ವಿಚಾರ ಶಾಲೆಯಲ್ಲಿ ಗೊತ್ತಾಗಿ ಶಿಕ್ಷಕಿಯರು ಮಧುಗೆ ಇನ್ನಷ್ಟು ಟಾರ್ಚರ್‌ ಮಾಡಿದ್ದಾರೆ ಎನ್ನಲಾಗಿದೆ.

ಅದೇ ದಿನ ಮನೆಗೆ ಬಂದ ಮಧುಶ್ರೀ, ಶಾಲೆಯಲ್ಲಿ ಶಿಕ್ಷಕಿಯರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ನಡೆದ ಎಲ್ಲಾ ವಿಚಾರವನ್ನ ಸಹೋದರಿ ಭಾನುಶ್ರೀ ಹೇಳಿದ್ದಳು. ಅದಾದ ಬಳಿಕ ಮಧುಶ್ರೀ ಆತ್ಮಹತ್ಯೆಗೆ ಶರಣಾಗಿದ್ದಳು.

ಬೆಂಗಳೂರಿನ ಆನೇಕಲ್‌ ತಾಲೂಕಿನ ಮರಸೂರು ಮಡಿವಾಳದಲ್ಲಿದ್ದ ಮಧುಶ್ರೀ ರಾಜ್ಯಮಟ್ಟದ ಕಬಡ್ಡಿ ಪ್ಲೇಯರ್‌. ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ವಿದ್ಯಾರ್ಥಿನಿ ಬರೆದಿದ್ದಳು. ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಳು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !