Tuesday, August 16, 2022

Latest Posts

BIG BREAKING | ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆಂದು ದೇವೇಂದ್ರ ಫಡ್ನವೀಸ್​ ಘೋಷಣೆ ಮಾಡಿದ್ದಾರೆ.
ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಭೇಟಿ ಮಾಡಿದ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿ ನಡೆಸಿದ ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವೀಸ್ ಈ ಮಹತ್ವದ ಮಾಹಿತಿ ಹೊರಹಾಕಿದ್ದಾರೆ.
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ರೆಬಲ್ ನಾಯಕ ಏಕನಾಥ್ ಶಿಂಧೆಯವರು, ಇಂದು ಸಂಜೆ 7 ಗಂಟೆಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮಹಾ ಅಘಾಡಿ ಸರ್ಕಾರ ಪತನವಾಗಲು ಪ್ರಮುಖವಾಗಿ ಕಾರಣವಾಗಿದ್ದ ಬಂಡಾಯ ಬಣದ ಲೀಡರ್ ಏಕನಾಥ್‌ ಶಿಂಧೆಗೆ ಮುಖ್ಯಮಂತ್ರಿ ಪಟ್ಟ ನೀಡುವ ನಿಟ್ಟಿನ ನಿರ್ಧಾರವನ್ನು ಸ್ವತಃ ದೇವೇಂದ್ರ ಫಡ್ನವಿಸ್‌ ಅವರೇ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss