ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜಿನಾಮೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯದ ಬೆನ್ನಲ್ಲೇ ನೂತನ ಸರ್ಕಾರ ರಚನೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮುಂಬೈನ ರಾಜಭವನದಲ್ಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ವೇಳೆ ಉಪ ಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಇದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು ಎನ್ನಲಾಗಿದೆ.

ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಬಿಜೆಪಿ, ಶಿಂಧೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿಯ ಮಹಾಯುತಿ ಮೈತ್ರಿಕೂಟವು 288 ಸದಸ್ಯ ಬಲದ ವಿಧಾನಸಭೆಯಲ್ಲಿ 230 ಸ್ಥಾನಗಳನ್ನು ಗೆದ್ದು ಭಾರಿ ಗೆಲುವು ಸಾಧಿಸಿದ್ದರೂ, ಮುಂದಿನ ಸಿಎಂ ಯಾರಾಗಬೇಕೆಂಬುದರ ಬಗ್ಗೆ ಆಡಳಿತಾರೂಢ ಒಕ್ಕೂಟದ ನಾಯಕರಿಂದ ಒಮ್ಮತ ಬರಬೇಕಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!