ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವೃದ್ಧೆಯನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ.
ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಬಳಿ 78 ವರ್ಷದ ಗುಂಡಮ್ಮ ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆ. ಚಾಮರಾಜನಗರದ ಬೆಂಡರವಾಡಿಯ ಗುಂಡಮ್ಮ ಕುಟುಂಬ ಕಲಹದಿಂದ ಬೇಸರಿಸಿಕೊಂಡು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ದಾರೆ.
ನದಿಗೆ ಹಾರಿದ ಗುಂಡಮ್ಮನನ್ನು ಸ್ಥಳೀಯರು ನೋಡಿದ್ದಾರೆ. ಅವರು ಒದ್ದಾಡುವುದನ್ನು ಕೂಡಲೇ ಗಮನಿಸಿ ರಕ್ಷಣೆ ಮಾಡಿದ್ದಾರೆ. ನೀರಿನ ಮಟ್ಟ ಕಡಿಮೆಯಾದ ಕಾರಣ ಸ್ಥಳೀಯರಿಬ್ಬರು ತಕ್ಷಣವೇ ನದಿಗೆ ಹಾರಿ ಅಜ್ಜಿಯ ಪ್ರಾಣ ಉಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.



