ಹೊಸದಿಗಂತ ವರದಿ ಬೆಳಗಾವಿ:
ಮಹಾಮಾರಿ ಕೊರೋನಾಕ್ಕೆ ನಗರದಲ್ಲಿ ಮೊದಲ ಬಲಿಯಾಗಿದ್ದು, ಎಪ್ಪತ್ತು ವರ್ಷದ ವಯೋವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬುಧವಾರ ತಪಾಸಣೆ ಕೈಗೊಂಡ ವೇಳೆ 70 ವರ್ಷದ ವೃದ್ಧನಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಇಲ್ಲಿನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಡರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದ್ದು, ಕೋವಿಡ್ ನಿಯಮಾವಳಿಯಂತೆ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕೋವಿಡ್ ತಪಾಸಣೆ ವೇಳೆ ಪಾಸಿಟಿವ್ ಬಂದಾಗ ತಕ್ಷಣವೇ ಕೋವಿಡ್ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿತ್ತು.