ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.
ಸೋಮವಾರ ಕೋವಿಡ್ ಸಂಬಂಧ ಸಭೆ ಮಾಡಿದ್ದೇನೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆ ಸಭೆ ಮಾಡಿದ್ದೇನೆ. ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಸೂಚನೆ ಕೊಟ್ಟಿದ್ದೇನೆ ಎಂದರು.
ಮಕ್ಕಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರನ್ನ ಶಾಲೆಗೆ ಕಳಿಸೋದು ಬೇಡ ಎಂದು ಹೇಳಿದ್ದೇವೆ. ವಯಸ್ಸಾದವರು, ವಿವಿಧ ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಧರಿಸಬೇಕು ಎಂದು ಸಲಹೆ ಸಿಎಂ ಕೊಟ್ಟಿದ್ದಾರೆ.