ಕರ್ನಾಟಕದಲ್ಲಿ ರಂಗೇರಿದ ಚುನಾವಣಾ ಕಣ: ಮೇ.4 ರಂದು ಉಡುಪಿಗೆ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕದಲ್ಲಿ ಚುನಾವಣಾ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ . ಇದರ ಭಾಗವಾಗಿ ಮೇ.4 ರಂದು ಉಡುಪಿಯಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಮೋದಿ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ.

ಕರ್ನಾಟಕದ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 15 ರಿಂದ 20 ರ್ಯಾಲಿ ನಡೆಸಲಿದ್ದಾರೆ. ಇದೀಗ ಮೇ. 4 ರಂದು ಉಡುಪಿ ನಗರದ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮೋದಿ ಆಗಮಿಸುತ್ತಿದ್ದಾರೆ. ಈ ಬಾರಿಯ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಆಗಮನ ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!