ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ಪಕ್ಷಗಳಿಗೆ ಬೇನಾಮಿ ದೇಣಿಗೆ ನೀಡಲು ಅವಕಾಶ ನೀಡುವ ಚುನಾವಣಾ ಬಾಂಡ್ ವ್ಯವಸ್ಥೆ ಸಂವಿಧಾನ ಬಾಹಿರ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ಸಾಂವಿಧಾನಿಕ ನ್ಯಾಯಮೂರ್ತಿಗಳ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ಚುನಾವಣಾ ಬಾಂಡ್ ಪದ್ಧತಿಯ ಸಾಂವಿಧಾನಿಕ ಮಾನ್ಯತೆಯನ್ನು ವಿರೋಧಿಸಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕಳೆದ ವರ್ಷ ನವೆಂಬರ್ 2 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಐತಿಹಾಸಿಕ ತೀರ್ಪಿನಲ್ಲಿ ನ್ಯಾಯಾಲಯವು ಈ ಯೋಜನೆಯ ಸಾಂವಿಧಾನಿಕತೆಯನ್ನು ನಿರಾಕರಿಸಿದೆ.