ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಪರ ಪ್ರಚಾರ ನಡೆಸಲಿರುವ ಅಮಿತ್ ಶಾ ಮತ ಯಾಚನೆ ಮಾಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಬಹಿರಂಗ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಪ್ರಭಾಕರ ಕೋರೆ, ರಮೇಶ್ ಕತ್ತಿ, ನಿಖಿಲ್ ಕತ್ತಿ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾಂತೇಶ ಕವಟಗಿ ಮಠ ಭಾಗವಹಿಸಲಿದ್ದಾರೆ.