ವೈಎಸ್​ಆರ್​ಸಿಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ, ಅಲ್ಲು ಅರ್ಜುನ್ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದಲ್ಲಿ ಈ ಬಾರಿಯ ಚುನಾವಣೆ ಭಾರೀ ಗಮನ ಸೆಳೆದಿದೆ. ಪವನ್ ಕಲ್ಯಾಣ್ ಮತ್ತು ಚಂದ್ರಬಾಬು ನಾಯ್ಡು ಅವರು ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಅನ್ನು ಸೋಲಿಸಲು ಪಣ ತೊಟ್ಟಿದ್ದಾರೆ. ಪವನ್ ಕಲ್ಯಾಣ್ ಅವರಿಗೆ ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಈ ಚುನಾವಣೆಯಲ್ಲಿ ಅವರು ತಮ್ಮ ಜನಸೇನಾ ಪಕ್ಷಕ್ಕೆ ದೊಡ್ಡ ಉತ್ತೇಜನ ನೀಡಲು ಪ್ರಯತ್ನಿಸುತ್ತಿದ್ದಾರೆ.

ಪವನ್ ಪರವಾಗಿ ಮೆಗಾಸ್ಟಾರ್ ಕುಟುಂಬದ ಕೆಲವು ಸದಸ್ಯರು ಕೂಡ ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ಆದರೆ, ಒಂದೇ ಕುಟುಂಬದ ಅಲ್ಲು ಅರ್ಜುನ್ ಮಾತ್ರ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಇದೀಗ ಪ್ರಚಾರದಲ್ಲಿದ್ದ ಅಲ್ಲು ಅರ್ಜುನ್ ಮೇಲೂ ಆರೋಪ ಕೇಳಿಬಂದಿದೆ.

ಆಂಧ್ರದ ನಾಂದ್ಯಾಲ್ ಕ್ಷೇತ್ರದ ವೈಎಸ್​ಆರ್ ಕಾಂಗ್ರೆಸ್ ಅಭ್ಯರ್ಥಿ ಶಿಲ್ಪಾ ರವಿಚಂದ್ರ ರೆಡ್ಡಿ ಪರವಾಗಿ ಅಲ್ಲು ಅರ್ಜುನ್ ಪ್ರಚಾರ ಮಾಡಿದ್ದಾರೆ. ನಿನ್ನೆ (ಮೇ 11) ಶಿಲ್ಪಾ ರವಿಚಂದ್ರ ರೆಡ್ಡಿ ಮನೆಗೆ ಭೇಟಿ ನೀಡಿದ್ದ ಅಲ್ಲು ಅರ್ಜುನ್, ತಮ್ಮ ಗೆಳೆಯನನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದ್ದಾರೆ. ಅಲ್ಲು ಅರ್ಜುನ್​ ಶಿಲ್ಪಾ ರವಿಚಂದ್ರ ರೆಡ್ಡಿ ಅವರ ಮನೆಗೆ ಬಂದು ಅಲ್ಲಿ ಸೇರಿದ್ದ ಜನರಿಗೆ ಕೈ ಬೀಸಿ ಗೆಳೆಯನ ಕೈ ಹಿಡಿದು ಮೇಲೆತ್ತಿ ಗೆಳೆಯನ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಬಳಿಕ ಅಲ್ಲಿಂದ ತೆರಳಿದ್ದಾರೆ. ಯಾವುದೇ ರೋಡ್ ಶೋನಲ್ಲಿ ಅಲ್ಲು ಅರ್ಜುನ್ ಪಾತ್ರವಿಲ್ಲ.

 

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!