ಕೇರಳದಲ್ಲಿ ಮತದಾನ ಅವ್ಯವಸ್ಥೆ: ಸೂಕ್ತ ತನಿಖೆಗೆ ಆಗ್ರಹಿಸಿ ಆಯೋಗಕ್ಕೆ ವಿರೋಧ ಪಕ್ಷದ ನಾಯಕ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಉಂಟಾಗಿದ್ದ ಅವ್ಯವಸ್ಥೆಗಳ ಕುರಿತು ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.

ಈ ಬಗ್ಗೆ ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಹಲವು ಮತದಾರರು ಸಂಜೆ ಆರು ಗಂಟೆಯ ಮೊದಲು ಮತಗಟ್ಟೆಗಳಿಗೆ ತಲುಪಿದ್ದರೂ ಅವರಿಗೆ ಮತದಾನ ಮಾಡಲು ಸಾಧ್ಯವಾಗಿಲ್ಲ. ಹಲವು ಮತಗಟ್ಟೆಗಳಲ್ಲಿ ಅನಗತ್ಯವಾಗಿ ಮತದಾನ ವಿಳಂಬವಾಗಿತ್ತು. ಮತದಾರರು ನಾಲ್ಕು ಗಂಟೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆಲವು ಕಡೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇರಳದಲ್ಲಿ ನಡೆದ ಚುನಾವಣಾ ಪ್ರಕ್ರಿಯೆ ತೃಪ್ತಿಕರವಾಗಿತ್ತು ಎಂದು ಮುಖ್ಯ ಚುನಾವಣಾ ಅಧಿಕಾರಿ ಹೇಳಿಕೆ ನೀಡಿದ ಬೆನ್ನಿಗೇ ಸತೀಶನ್, ಈ ಆರೋಪ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!