Tuesday, May 30, 2023

Latest Posts

ಡಿಕೆಶಿ ಕುಟುಂಬಕ್ಕೆ ಚುನಾವಣಾ ನೀತಿ ಸಂಹಿತೆ ಬಿಸಿ: ಹೆಲಿಕಾಪ್ಟರ್ ತಪಾಸಣೆ ವೇಳೆ ಮಾತಿನ ಚಕಮಕಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಚುನಾವಣಾ ಅಖಾಡ ರಂಗೇರಿದ್ದು,ವಿವಿಧ ರಾಜಕೀಯ ಪಕ್ಷಗಳು ನಾಮಪತ್ರ ಸಲ್ಲಿಕೆಯ ಬಳಿಕ ಟೆಂಪಲ್ ರನ್ ಶುರು ಮಾಡಿದ್ದೂ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡಿದ್ದು, ಹೆಲಿಪ್ಯಾಡ್ ನಲ್ಲಿ ಕುಟುಂಬ ಸಮೇತ ಬಂದಿಳಿದರು.

ಇನ್ನು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅಧಿಕಾರಿಗಳು ರಾಜಕಾರಣಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂದಿದ್ದಾಗಲೂ ಅವರ ಹೆಲಿಕಾಪ್ಟರ್ ಅನ್ನು ಪರಿಶೀಲನೆ ನಡೆಸಲಾಗಿತ್ತು.

ಇತ್ತ ‌ ಚುನಾವಣಾಧಿಕಾರಿಗಳು ತಪಾಸಣೆಗೆ ಮುಂದಾದಾಗ ಪೈಲೆಟ್ ಮಾತಿನ ಚಕಮಕಿ ನಡೆದಿದೆ. ಇದು ಖಾಸಗಿ ಹೆಲಿಕಾಪ್ಟರ್ ಆಗಿದ್ದು, ಇದನ್ನು ತಪಾಸಣೆ ಮಾಡಲು ಅವಕಾಶವಿಲ್ಲ ಎಂದು ಪೈಲೆಟ್ (Pilot) ರಾಮ್‌ದಾಸ್ ಹೇಳಿದ್ದಾರೆ. ಈ ವೇಳೆ ಚುನಾವಣಾ ಅಧಿಕಾರಿ (Election Officer) ಹಾಗೂ ಪೈಲೆಟ್ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಚುನಾವಣಾ ಅಧಿಕಾರಿಗಳು ಹೆಲಿಕಾಪ್ಟರ್ ಮತ್ತು ಅವರ ಕಾರನ್ನೂ ಕೂಡಾ ತಪಾಸಣೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!