September 28, 2026
Monday, September 28, 2026
spot_img

ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣಾ ಆಯೋಗದ ಕಣ್ಣು: 11,000 ಪೋಸ್ಟ್‌ಗಳಿಗೆ ಗೇಟ್ ಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚ ರಾಜ್ಯ ಚುನಾವಣೆ ಘೋಷಣೆಗೊಂಡ ಬಳಿಕ ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ 11,000 ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ.

ಈ ಕುರಿತು ಮಾಹಿತಿ ನೀಡಿದ ಆಯೋಗ, ಈಗಾಗಲೇ ಸಾಮಾಜಿಕ ಮಾಧ್ಯಮಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಜೊತೆಗೆ ಎಐ ವಿಷಯಗಳ ಮೇಲು ನಿಯಂತ್ರಣ ಹೇರಲಾಗಿದೆ. ಹೀಗಾಗಿ ಯಾವುದೇ ರೀತಿಯ ಕಾನೂನುಬಾಹಿರ ಮಾಹಿತಿ ಬಂದಲ್ಲಿ ಮೂರು ಗಂಟೆಗಳ ಒಳಗೆ ತೆಗೆದುಹಾಕಬೇಕು ಎಂದು ಸೂಚಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.

ಆಯೋಗದ ಸಿ-ವಿಜಿಲ್ ಅಪ್ಲಿಕೇಶನ್ ಮೂಲಕ ಇಲ್ಲಿವರೆಗೆ ಬಂದ ದೂರುಗಳಲ್ಲಿ 3,10,393 ದೂರುಗಳಿಗೆ ಪರಿಹಾರ ನೀಡಲಾಗಿದೆ. ಜೊತೆಗೆ ನೀತಿ ಸಂಹಿತೆ ಉಲ್ಲಂಘಿಸುವ, ಸುಳ್ಳು ಮಾಹಿತಿ ಹರಡುವ ವಿಷಯಗಳ ಮೇಲೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ಆಯೋಗ ತಿಳಿಸಿದೆ . ಎಲ್ಲಾ ರಾಜ್ಯಗಳಲ್ಲಿ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಐಟಿ ನೋಡಲ್ ಅಧಿಕಾರಿಗಳನ್ನೂ ನೇಮಿಸಲಾಗಿದ್ದು, ಐಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಗುತ್ತಿದೆ ಎಂದು ಆಯೋಗ ತಿಳಿಸಿದೆ.

Must Read