ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ದೂರು ದಾಖಲಿಸಿದೆ.

ಕರ್ನಾಟಕದ ಒಟ್ಟು 28 ಸ್ಥಾನಗಳ ಪೈಕಿ 14 ಕ್ಷೇತ್ರಗಳಿಗೆ ಇಂದು ಮೊದಲ ಹಂತದಲ್ಲಿ ಮತದಾನ ಭರದಿಂದ ಸಾಗುತ್ತಿದೆ.ಈ ಮಧ್ಯೆ ಎಕ್ಸ್‌ನಲ್ಲಿ ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ (Karnataka Election Commission) ಎಕ್ಸ್‌ನಲ್ಲಿ ತಿಳಿಸಿದೆ.

ಏ.25 ರಂದು ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಅಯೋಧ್ಯೆಯ (Ayodhya) ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್‌ ಮಾಡಿ, ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕವನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ. ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!