January20, 2026
Tuesday, January 20, 2026
spot_img

ಮತಗಳ್ಳತನ ಆರೋಪ: ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಕೊಡುವಂತೆ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೊಟೀಸ್ ಕೊಟ್ಟಿದೆ.

1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ನೀವು ಮಾಡಿರುವ ಆರೋಪಗಳಿಗೆ ದಾಖಲೆಗಳನ್ನ ಒದಗಿಸುವಂತೆ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗ ನೊಟೀಸ್​ ನೀಡಿದೆ.

ಮತಗಳ್ಳತನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಆಗಸ್ಟ್​ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಾಖಲೆಗಳ ಬಿಡುಗಡೆ ಮಾಡಿದ್ದರು.

ಸುದ್ದಿಗೋಷ್ಠಿಯಲ್ಲಿ ನೀವು ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ಹೇಳಿದ್ದೀರಿ. ಇದು ಚುನಾವಣಾ ಆಯೋಗದ ಡೇಟಾನಾ ಎಂದು ಕಾಂಗ್ರೆಸ್‌ ನಾಯಕನಿಗೆ ಆಯೋಗ ಪ್ರಶ್ನಿಸಿದೆ.

ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಗಳ ಪ್ರಕಾರ, ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ಹೇಳಿದ್ದೀರಿ. ‘ಈಸ್ ಐಡಿ ಕಾರ್ಡ್ ಪರ್ ದೋ ಬಾರ್ ವೋಟ್ ಲಗಾಹೈ, ವೋ ಜೋ ಟಿಕ್ ಹೈ, ಪೋಲಿಂಗ್ ಬೂತ್ ಕೆ ಆಫೀಸರ್ ಕಿಹೈ’ ಎಂದು ಹೇಳಿದ್ದೀರಿ. ಆದರೆ, ಶಕುನ್ ರಾಣಿ ಅವರು ನೀವು ಆರೋಪಿಸಿದಂತೆ ಎರಡು ಬಾರಿ ಅಲ್ಲ, ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಪ್ರಾಥಮಿಕ ವಿಚಾರಣೆಯಲ್ಲಿ, ನೀವು ಪ್ರಸ್ತುತಿಯಲ್ಲಿ ತೋರಿಸಿರುವ ಟಿಕ್ ಗುರುತು ಮಾಡಿದ ದಾಖಲೆಯು ಮತಗಟ್ಟೆ ಅಧಿಕಾರಿ ನೀಡಿದ ದಾಖಲೆಯಲ್ಲ. ಹಾಗಾಗಿ, ಶಕುನ್ ರಾಣಿಯೋ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ರೆ ನೀವು ದಾಖಲೆಗಳನ್ನು ಒದಗಿಸಿ. ಆಗ ಚುನಾವಣಾ ಆಯೋಗ ವಿಚಾರಣೆ ನಡೆಸಲಿದೆ ಎಂದು ತಿಳಿಸಿದೆ.

Must Read