ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಚುನಾವಣಾ ಆಯೋಗ ಗುರುವಾರ ಶೋಕಾಸ್ ನೋಟಿಸ್ ನೀಡಿದೆ.
ರಾಜಸ್ಥಾನದ ದೌಸಾದಲ್ಲಿ ಭಾಷಣ ಮಾಡುವಾಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಪ್ರಿಯಾಂಕಾ ಗಾಂಧಿ ಮೇಲಿದೆ. ಅಕ್ಟೋಬರ್ 30ರ ಸಂಜೆ 5 ಗಂಟೆಯೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಆಯೋಗ ಸೂಚಿಸಿದೆ.
ಅಕ್ಟೋಬರ್ 20 ರಂದು ರಾಜಸ್ತಾನದ ದೌಸಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಪ್ರಿಯಾಂಕಾ ವಾದ್ರಾ, ದೇವಸ್ಥಾನದಲ್ಲಿ ಪಿಎಂ ಮೋದಿ ನೀಡಿದ ದೇಣಿಗೆಯ ಲಕೋಟೆಯನ್ನು ತೆರೆದಾಗ ಅದು ಕೇವಲ ₹ 21 ಇತ್ತು ಎಂದು ಟಿವಿಯಲ್ಲಿ ನೋಡಿದೆ. ಅದು ನಿಜವೋ ಸುಳ್ಳೋ ಎಂದು ತಿಳಿದಿಲ್ಲ ಹೇಳಿಕೆ ನೀಡಿದ್ದಾರೆ.
ಈ ಸಂಬಂಧ ಬಿಜೆಪಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.