ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಕೇಂದ್ರ ಚುನಾವಣಾ ಆಯೋಗದಿಂದ (Central Election Commission) ನೋಟಿಸ್ ನೀಡಲಾಗಿದೆ.
ಪ್ರಧಾನಿ ವಿರುದ್ಧ ನೀಡಿರುವ ಹೇಳಿಕೆ ಸಂಬಂಬಂಧ ಬಿಜೆಪಿ ಕೇಂದ್ರ ಚುನಾವಣಾ ಆಯೋಗ ಕ್ಕೆ ದೂರು ನೀಡಿತ್ತು.
ಪ್ರಧಾನಿಯೊಬ್ಬರನ್ನು ಜೇಬುಗಳ್ಳ ಮತ್ತು ಅಪಶಕುನಕ್ಕೆ ಹೋಲಿಸುವುದು ಸರಿಯಲ್ಲ. ಇದು ರಾಜಕೀಯ ಚರ್ಚೆಯ ಮಟ್ಟ ಹದಗೆಡುತ್ತಿರುವುದರ ಸಂಕೇತವಾಗಿದೆ. ಯಾವುದೇ ವ್ಯಕ್ತಿಯನ್ನು ಜೇಬುಗಳ್ಳರೆಂದು ಕರೆಯುವುದು ಕೆಟ್ಟ ನಿಂದನೆ ಮತ್ತು ವೈಯಕ್ತಿಕ ದಾಳಿಗೆ ಸಮವಾಗಿರುತ್ತದೆ. ಅವರ ಪ್ರತಿಷ್ಠೆಗೆ ಹಾನಿ ಮಾಡುವ ಮತ್ತು ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಸ್ಪಷ್ಟ ಉದ್ದೇಶದಿಂದ ಅಂತಹ ಹೇಳಿಕೆಯನ್ನು ನೀಡಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಇದೀಗ ರಾಗಾಗೆ ನೋಟಿಸ್ ನೀಡಲಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ನೀಡಿದ್ದ ಹೇಳಿಕೆಗೆ ನವೆಂಬರ್ 25 ಒಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ನಲ್ಲಿ ಸೂಚಿಸಲಾಗಿದೆ.
ರಾಹುಲ್ ಹೇಳಿದ್ದೇನು?
ರಾಜಸ್ಥಾನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಮೋದಿ ಪನೋತಿ (ಅಪಶಕುನ) ಮತ್ತು ಜೇಬುಗಳ್ಳ ಎಂದಿದ್ದರು. ನಮ್ಮ ಹುಡುಗರು ಬಹುತೇಕ ವಿಶ್ವಕಪ್ ಗೆಲ್ಲುತ್ತಿದ್ದರು. ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿಯೇ ಅಖಾಡಕ್ಕಿಳಿದಿದ್ದರು. ಆದರೆ ಕೆಟ್ಟ ಶಕುನವೊಂದು ಮೈದಾನ ಪ್ರವೇಶಿಸಿದ ಪರಿಣಾಮ ಕಪ್ ಕಳೆದುಕೊಳ್ಳುವಂತೆ ಮಾಡಿದೆ. ಅಲ್ಲದೇ ರಾಹುಲ್ ಗಾಂಧಿಯವರು ಜನರಿಂದಲೂ ಅಪಶುಕುನ ಎನ್ನುವ ಪದ ಹೇಳಿಸಿದ್ದರು.