ತೆಲಂಗಾಣದಲ್ಲಿ ಜಾಹೀರಾತು ಪ್ರಕಟ: ಕರ್ನಾಟಕ ಸರಕಾರಕ್ಕೆ ಇಸಿ ನೋಟಿಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತೆಲಂಗಾಣ ಪತ್ರಿಕೆಗಳಲ್ಲಿ ಸರಕಾರಿ ಜಾಹೀರಾತು ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕರ್ನಾಟಕ ಸರಕಾರಕ್ಕೆ ಚುನಾವಣಾ ಆಯೋಗ ನೋಟಿಸ್‌ ಜಾರಿ ಮಾಡಿದೆ.

ತೆಲಂಗಾಣದ ಪತ್ರಿಕೆಗಳಲ್ಲಿ ನಿಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಪ್ರಕಟಣೆಗಳನ್ನು ನೀಡುವುದರ ಅರ್ಥವೇನು? ಎಂದು ಚುನಾವಣಾ ಆಯೋಗ ಪ್ರಶ್ನೆ ಮಾಡಿದ್ದು, ನೀಡಿರುವ ನೋಟಿಸ್‌ಗೆ ನವೆಂಬರ್ 28ರ ಸಂಜೆ 5ಗಂಟೆಯೊಳಗೆ ಉತ್ತರಿಸುವಂತೆ ಆದೇಶ ಜಾರಿಮಾಡಿದೆ.

ಕರ್ನಾಟಕ ರಾಜ್ಯ ಸರ್ಕಾರದ ಘೋಷಣೆಗಳ ವಿಷಯವನ್ನು ಬಿಜೆಪಿ ಮತ್ತು ಬಿಆರ್‌ಎಸ್ ತಮ್ಮ ಗಮನಕ್ಕೆ ತಂದಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗೆ ಕಾರಣವಾದ ಸಂದರ್ಭಗಳನ್ನು ವಿವರಿಸಲು ಮತ್ತು ಅಂತಹ ಪ್ರಕಟಣೆಗಳನ್ನು ತಕ್ಷಣವೇ ನಿಲ್ಲಿಸಿ ಆದೇಶ ಹೊರಡಿಸಿದೆ.

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದ್ದು, ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ಡಿಸೆಂಬರ್‌ 3ರಂದು ಮತಎಣಿಕೆ ಕಾರ್ಯ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!