ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅನಧಿಕೃತ ಹಾಗೂ ಸುಳ್ಳು ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿಗೆ‌ ಚುನಾವಣಾ ಆಯೋಗ ಶೋಕಾಸ್‌ ನೋಟಿಸ್ ಜಾರಿ ಮಾಡಿದೆ.

ಅಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಧಾನಿ ಕುರಿತಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂಬ ಆರೋಪದ ಮೇಲೆ ಆಮ್‌ ಆದ್ಮಿ ಪಕ್ಷಕ್ಕೂ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ.

ಇತ್ತೀಚೆಗೆ ಮಧ್ಯಪ್ರದೇಶದ ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧಿಕೃತ ಹಾಗೂ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು.

ಅದಲ್ಲದೆ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ.

ಈ ಹೇಳಿಕೆಗಳ ಕುರಿತಾಗಿ ನವೆಂಬರ್ 16ರ ರಾತ್ರಿ 8ರೊಳಗೆ ಉತ್ತರಿಸಬೇಕು ಎಂದು ಚುನಾವಣಾ ಆಯೋಗವು ನೋಟಿಸ್‌ನಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!