ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಭಾರತೀಯ ಚುನಾವಣಾ ಆಯೋಗವು ಘೋಷಣೆ ಮಾಡಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ವೇಳಾಪಟ್ಟಿಯನ್ನು ಪ್ರಕಟಿಸಿದರು.
ತೆಲಂಗಾಣ, ಛತ್ತೀಸ್ಗಢ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಮಿಜೋರಾಂ ಈ ಐದು ರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ದಿನಾಂಕಗಳ ವಿವರ ಕೆಳಗಿನಂತಿದೆ.
ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಮತದಾನ, ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 7 ರಂದು ಮಿಜೋರಾಂ, ನವೆಂಬರ್ 23 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ವೋಟಿಂಗ್ ನಡೆಯಲಿದೆ. ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಐದು ರಾಜ್ಯಗಳಲ್ಲಿ ಪುರುಷ ಮತದಾರರ ಸಂಖ್ಯೆ 8.24 ಕೋಟಿ ಮತ್ತು ಮಹಿಳಾ ಮತದಾರರ ಸಂಖ್ಯೆ 7.88 ಕೋಟಿಯಷ್ಟಿದೆ. ಮೊದಲ ಬಾರಿಗೆ 60 ಲಕ್ಷ ಮಂದಿ ಮತ ಚಲಾಯಿಸುತ್ತಿದ್ದಾರೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.