ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ನಡೆಯುವ ಸಾರ್ವಜನಿಕ ಸಭೆ, ರೋಡ್ ಶೋ, ಸಭೆಗಳ ಮೇಲೆ ವಿಧಿಸಿದ್ದ ನಿರ್ಬಂಧದ ಅವಧಿಯನ್ನು ಚುನಾವಣಾ ಆಯೋಗ ಜ.22ಕ್ಕೆ ವಿಸ್ತರಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಚುನಾವಣಾ ಆಯೋಗದ ಅಧಿಕಾರಿಗಳು, ಪಂಚರಾಜ್ಯ ಚುನಾವಣೆ ಹಿನ್ನೆಲೆ ಜ.15ರವರೆಗೆ ಇದ್ದ ರಾಜಕೀಯ ಪಕ್ಷಗಳ ನಾಯಕರಿಗೆ ವಿಧಿಸಲಾಗಿದ್ದ ನಿರ್ಬಂಧನದ ಅವಧಿಯನ್ನು ಈಗ ಆರೋಗ ವಿಸ್ತರಿಸಿದೆ.
ದೇಶದಲ್ಲಿ ಕೊರೋನಾ ಹರಡುವಿಕೆ ಪ್ರಮಾಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣಾ ಕಾರ್ಯದರ್ಶಿಗಳ ಜತೆ ಸಮಾಲೋಚನೆ ನಡೆಸಿ ನಿರ್ಬಂಧದ ಅವಧಿಯನ್ನು ಜ.22ರವರೆಗೆ ವಿಸ್ತರಿಸಿದೆ.
ಸಾರ್ವಜನಿಕ ಸಭೆ, ರೋಡ್ ಶೋ, ರ್ಯಾಲಿಗಳಿಗೆ ಚುನಾವಣಾ ಆಯೋಗ ಕಡಿವಾಣ ಹಾಕಿದೆ. ಗೋವಾ, ಮಣಿಪುರ, ಉತ್ತರಾಖಂಡ್, ಉತ್ತರಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ಫೆಬ್ರವರಿ 10ರಿಂದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯುತ್ತದೆ.
ಚುನಾವಣೆ ನಡೆಯಲಿರುವ ರಾಜ್ಯಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಹಾಗೂ ಕೋವಿಡ್ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚಿಸಿದೆ.