July 28, 2026
Tuesday, July 28, 2026
spot_img

ಬಂಗಾಳದ ಫಾಲ್ಟಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳ ಆರೋಪ: ಮರು ಮತದಾನಕ್ಕೆ ಆಯೋಗ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ವೇಳೆ ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ಟಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮಗಳು ಮತ್ತು ನಿಯಮ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆ ಭಾರತೀಯ ಚುನಾವಣಾ ಆಯೋಗವು ಮೇ 21 ರಂದು ಮರುಮತದಾನ ನಡೆಸುವಂತೆ ಸೂಚಿಸಿದೆ.

ಏಪ್ರಿಲ್ 29 ರಂದು ಎರಡನೇ ಹಂತದ ಮತದಾನದ ವೇಳೆ ಫಾಲ್ಟಾ ಕ್ಷೇತ್ರದಲ್ಲಿ ವ್ಯಾಪಕ ಅಕ್ರಮಗಳು ಮತ್ತು ನಿಯಮಗಳ ಉಲ್ಲಂಘನೆ ನಡೆದಿರುವ ಕುರಿತು ವರದಿಗಳಾಗಿದ್ದವು.
ಇತ್ತ ಗ್ರಾಮಸ್ಥರು ಕೂಡ ಮರುಮತದಾನ ನಡೆಸಬೇಕು ಎಂದು ಆಗ್ರಹಿಸಿದ್ದರು. ಹೀಗಾಗಿ ಚುನಾವಣಾ ಆಯೋಗವು ಈ ಹಿಂದಿನ ಮತದಾನವನ್ನು ರದ್ದುಗೊಳಿಸಿದೆ. ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲು ಆದೇಶಿಸಿದೆ.

ಮೇ 21 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮರುಮತದಾನ ನಡೆಯಲಿದ್ದು, ಮೇ 24 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಫಾಲ್ಟಾ ಕ್ಷೇತ್ರದಲ್ಲಿ ಮತದಾನ ನಡೆದು ಕೆಲವೇ ಹೊತ್ತಿನಲ್ಲಿ ಟಿಎಂಸಿ ಕಾರ್ಯಕರ್ತರು ಮೇ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಹಿಂಸಾಚಾರ ಮತ್ತು ಮನೆಗಳಿಗೆ ಬೆಂಕಿ ಹಚ್ಚುವುದಾಗಿ ಸ್ಥಳೀಯರಿಗೆ ಬೆದರಿಕೆ ಹಾಕಿದ್ದರು. ಈ ಬೆನ್ನಲ್ಲೇ ಗ್ರಾಮಸ್ಥರು ತಮಗೆ ಭದ್ರತೆ ಒದಗಿಸಬೇಕು ಮತ್ತು ಕ್ಷೇತ್ರದಲ್ಲಿ ಮರುಮತದಾನ ನಡೆಸಬೇಕು ಎಂದು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !