ಪಂಜಾಬ್​ ವಿಧಾನಸಭೆ ಚುನಾವಣೆ ದಿನಾಂಕ ಮುಂದೂಡಿದ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚ ರಾಜ್ಯ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಅದರಲ್ಲಿ ಫೆಬ್ರವರಿ 14ರಂದು ನಡೆಯಬೇಕಿದ್ದ ಪಂಜಾಬ್​ ವಿಧಾನಸಭೆ ಚುನಾವಣೆ ಮುಂದೂಡಿಕೆಯಾಗಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆ ಹೊರಡಿಸಿದೆ.

ಇದೀಗ ಹೊಸ ದಿನಾಂಕ ಘೋಷಣೆಯಾಗಿದ್ದು, ಫೆ.20ರಂದು ಮತದಾನ ನಡೆಸಲು ನಿರ್ಧರಿಸಲಾಗಿದೆ. 117 ವಿಧಾನಸಭೆ ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪಂಜಾಬ್​ ಜನತೆಗೆ ಗುರು ರವಿದಾಸ್​ ಜಯಂತಿ ಆಚರಣೆ ಅತ್ಯಂತ ವಿಶೇಷ ಈ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಮುಖ್ಯಮಂತ್ರಿ ಚರಣ್​ಜಿತ್​ ಸಿಂಗ್ ಚನ್ನಿ ಸಹಿತ ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದವು.

ಗುರು ರವಿದಾಸ್​ ಜಯಂತಿಯಂದು ಪಂಜಾಬ್ ಜನತೆ ಉತ್ತರ ಪ್ರದೇಶದ ಬನಾರಸ್​ಗೆ ಭೇಟಿ ನೀಡಿ ಜಯಂತಿಯಲ್ಲಿ ಭಾಗಿಯಾಗುತ್ತಾರೆ. ಇದೇ ಕಾರಣಕ್ಕಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಒತ್ತಾಯಿಸಲಾಗಿತ್ತು.

ಈ ಹಿಂದೆ ಫೆ. 14ರಂದು ಗೋವಾ, ಉತ್ತರಾಖಂಡ ಹಾಗೂ ಪಂಜಾಬ್​ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲು ಆಯೋಗ ನಿರ್ಧರಿಸಿತ್ತು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!