March 22, 2026
Sunday, March 22, 2026
spot_img

ರಾಹುಲ್ ಗಾಂಧಿ ‘ಆಳಂದ’ ಮತಗಳ್ಳತನ ಆರೋಪಕ್ಕೆ ಉತ್ತರ ಕೊಟ್ಟ ಚುನಾವಣಾ ಆಯೋಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್ ಗಾಂಧಿ ಮಾಡಿರುವ ಆರೋಪಗಳು ತಪ್ಪಾಗಿದ್ದು ಆಧಾರರಹಿತವಾಗಿವೆ ಎಂದು ಚುನಾವಣಾ ಆಯೋಗ ಹೇಳಿದೆ.

ಈ ಕುರಿತು ಪೋಸ್ಟ್ ಮಾಡಿರುವ ಆಯೋಗ, ರಾಹುಲ್ ಗಾಂಧಿ ಆರೋಪಿಸಿದಂತೆ ಸಾರ್ವಜನಿಕರು ಯಾವುದೇ ಮತವನ್ನು ಆನ್‌ಲೈನ್‌ನಲ್ಲಿ (Online) ಅಳಿಸಲು ಸಾಧ್ಯವಿಲ್ಲ. ವ್ಯಕ್ತಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶ ನೀಡದೆ ಯಾವುದೇ ಅಳಿಸುವಿಕೆ ನಡೆಯುವುದಿಲ್ಲ ಎಂದು ತಿಳಿಸಿದೆ.

2023 ರಲ್ಲಿ ಕಲಬುರಗಿ ಜಿಲ್ಲೆಯ ಆಳಂದ್‌ ವಿಧಾನಸಭಾ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಪ್ರಯತ್ನಗಳನ್ನು ಮಾಡಲಾಗಿತ್ತು. ಈ ವಿಷಯದ ಬಗ್ಗೆ ತನಿಖೆ ನಡೆಸಲು ಚುನಾವಣಾ ಆಯೋಗದಿಂದಲೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದಿದೆ.

https://x.com/ECISVEEP/status/1968571868769829239?ref_src=twsrc%5Etfw%7Ctwcamp%5Etweetembed%7Ctwterm%5E1968571868769829239%7Ctwgr%5Eed8a368f949284d7461c17700cbd52d4067ecc2f%7Ctwcon%5Es1_&ref_url=https%3A%2F%2Fpublictv.in%2Fno-deletion-of-any-vote-can-be-done-online-by-any-member-of-the-public-election-commission%2F

ರಾಹುಲ್‌ ಗಾಂಧಿ ಆರೋಪ ಏನು?
ಆಳಂದದಲ್ಲಿ ಯಾರೋ ಒಬ್ಬರು 6,018 ಮತಗಳನ್ನು ಅಳಿಸಲು ಪ್ರಯತ್ನಿಸಿದ್ದರು. ಆದರೆ ಬೂತ್ ಮಟ್ಟದ ಅಧಿಕಾರಿ ತನ್ನ ಚಿಕ್ಕಪ್ಪನ ಮತ ಅಳಿಸಲ್ಪಟ್ಟಿರುವುದನ್ನು ಗಮನಿಸಿದರು. ಅಷ್ಟೇ ಅಲ್ಲದೇ ಅವರ ನೆರೆ ಹೊರೆಯವರ ಮತಗಳನ್ನು ಅಳಿಸಿರುವುದು ಗೊತ್ತಾಯಿತು. ಈ ಬಗ್ಗೆ ಪ್ರಶ್ನೆ ಮಾಡಿದಾಗ ನಾವು ಯಾರು ಮತಗಳನ್ನು ಡಿಲೀಟ್‌ ಮಾಡಲು ಹೇಳಿಲ್ಲ ಎಂದು ತಿಳಿಸಿದರು. ಹಾಗಾದರೆ ಈ ಮತಗಳ್ಳತನ ಮಾಡಿರುವುದು ಯಾರು ಎಂದು ಪ್ರಶ್ನಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !