March 28, 2026
Saturday, March 28, 2026
spot_img

ರಘುನಾಥಗಂಜ್ ಹಿಂಸಾಚಾರಕ್ಕೆ ಚುನಾವಣಾ ಆಯೋಗ ಹೊಣೆ: ಸಿಎಂ ಮಮತಾ ಬ್ಯಾನರ್ಜಿ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮನವಮಿಯ ಆಚರಣೆ ಸಂದರ್ಭ ಬಂಗಾಳದ ರಘುನಾಥಗಂಜ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಚುನಾವಣಾ ಆಯೋಗವೇ ಕಾರಣ ಎಂದು ಮಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇರ ಆರೋಪ ಮಾಡಿದ್ದಾರೆ.

ಪಶ್ಚಿಮ ಬರ್ಧಮಾನ್‌ನಲ್ಲಿ ಮಾತನಾಡಿದ ಅವರು, ಹಿಂಸಾಚಾರಕ್ಕೆ ನಾನು ಹೊಣೆ ಅಲ್ಲ, ಬದಲಾಗಿ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಆಯೋಗವೇ ಅನಾಹುತಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಆಯೋಗದಲ್ಲಿ ಹೊಸ ಅಧಿಕಾರಿಗಳ ನೇಮಕಗೊಂಡ ಬಳಿಕ ಅಶಾಂತಿ ಹೆಚ್ಚಾಗಿದೆ. ನನ್ನ ಹಕ್ಕುಗಳನ್ನು ಕಸಿದುಕೊಳ್ಳಲಾಗಿದ್ದು, ಈ ಹಿಂದಿನ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಇದೀಗ ಇಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಆರೋಪಿಸಿದರು.

ಮುರ್ಷಿದಾಬಾದ್ ಜಿಲ್ಲೆಯ ರಘುನಾಥ್‌ಗಂಜ್‌ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ರಾಮನವಮಿ ಮೆರವಣಿಗೆಯ ಸಂದರ್ಭ ಹಿಂಸಾಚಾರ ಭುಗಿಲೆದ್ದಿದ್ದು, ಹಲವಾರು ಜನರು ಗಾಯಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !