ಪಂಚರಾಜ್ಯ ಚುನಾವಣೆ: ವಿಜಯೋತ್ಸವದ ಮೇಲಿನ ನಿರ್ಬಂಧ ಸಡಿಲಿಸಿದ ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ರಾಜಕೀಯ ಪಕ್ಷಗಳ ಸಂಭ್ರಮಾಚರಣೆ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಚುನಾವಣಾ ಆಯೋಗ ಹಿಂಪಡೆದಿದೆ.‌
ಕೋವಿಡ್‌ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಹಿಂದೆ ಚುನಾವಣಾ ಆಯೋಗ ವಿಜಯ ಸಂಭ್ರಮಾಚರಣೆಗೆ ನಿರ್ಬಂಧ ಹೇರಿತ್ತು. ಇದೀಗ ಈ ನಿರ್ಬಂಧವನ್ನು ತೆಗೆದು ಹಾಕಲು ಆಯೋಗ ನಿರ್ಧರಿಸಿದೆ.
ಈ ನಿರ್ಬಂಧ ತೆರುವುಗೊಳಿಸಿರುವುದು ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳಿಗೆ ಅನುಗುಣವಾಗಿ ಇರಲಿದೆ ಎಂದು ಆಯೋಗ ತಿಳಿಸಿದೆ.
ಜ.8 2022ರಂದು ಗೋವಾ, ಮಣಿಪುರ, ಉತ್ತರಪ್ರದೇಶ, ಪಂಜಾಬ್ಮ ಉತ್ತರಖಂಡಗಳಲ್ಲಿ ವಿಧಾನಸಭೆ ಚುನಾವಣೆ ಘೋಷಿಸಿತ್ತು. ಕೋವಿಡ್‌ ಸಂದರ್ಭದಿಂದ ವಿಜಯೋತ್ಸವ ಸೇರದಿಂತೆ ಸಮಾವೇಶಗಳ ಮೇಲೆ ಚುನಾವಣಾ ಆಯೋಗ ನಿರ್ಬಂಧಗಳನ್ನು ಹೇರಿತ್ತು.
ಈಗ ನಿಯಮ ಸಡಿಲಿಕೆ ಬಗ್ಗೆ ರಾಜ್ಯ ಹಾಗೂ ಕೇಂದ್ರ ಆರೋಗ್ಯ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿ ಆಯೋಗ ನಿರ್ಧಾರ ಕೈಗೊಂಡಿದೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್‌ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲೂ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಎಲ್ಲಡೆ ಸಂಭ್ರಮಾಚರಣೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!