ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ .
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತಾರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಪಿಥೋರ್ ಗಢದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಹೆಲಿಕಾಪ್ಟರ್ ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಪಿಥೋರ್ ಗಢದ ರಲಂ ಗ್ರಾಮದಲ್ಲಿ ಅಧಿಕಾರಿಗಳು ಬಂದಿಳಿದ್ದು, ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ.