ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿ ರಚಿಸಿದ ಸುಪ್ರೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲು ಪ್ರಧಾನಮಂತ್ರಿ, ವಿಪಕ್ಷ ನಾಯಕ, ಭಾರತದ ಮುಖ್ಯ ನ್ಯಾಯಮೂರ್ತಿ ಅವರನ್ನು ಒಳಗೊಂಡ ಸಮಿತಿ ರಚನೆಗೆ ಸುಪ್ರೀಂಕೋರ್ಟ್‌ ಸಂವಿಧಾನ ಪೀಠ ಆದೇಶಿಸಿದೆ.

ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಈ ತೀರ್ಪು ನೀಡಿದೆ.

ಈ ಪ್ರಕ್ರಿಯೆಯಲ್ಲಿ ಹೆಚ್ಚು ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಕರೆ ನೀಡಿದ್ದು, ಚುನಾವಣಾಧಿಕಾರಿಗಳ ನೇಮಕಾತಿ ಸಿಬಿಐ ಮುಖ್ಯಸ್ಥರಂತೆಯೇ ಇರಬೇಕು ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!