ELECTION |ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನಕ್ಕೆ ಕ್ಷಣಗಣನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ನಡೆಯಲಿದೆ. ಇಂದು 102 ಕ್ಷೇತ್ರಗಳ 1625 ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಲಿದೆ.

ಐದು ವರ್ಷಗಳ ಹಿಂದೆ ಈ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ ಕಾಂಗ್ರೆಸ್‌ ಹಿನ್ನಡೆಯಾಗಿತ್ತು. ಬದಲಾದ ರಾಜಕೀಯ ಸಮೀಕರಣದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ I.N.D.I.A ಮೈತ್ರಿಕೂಟದ ನಡುವೆ ಈ ಬಾರಿ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.

ನಿತಿನ್ ಗಡ್ಕರಿ ಸೇರಿದಂತೆ ಎಂಟು ಕೇಂದ್ರ ಸಚಿವರ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಗೆಯ ವರೆಗೂ ಮತದಾನಕ್ಕೆ ಅವಕಾಶವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!