April 9, 2026
Thursday, April 9, 2026
spot_img

ಪಂಚ ರಾಜ್ಯಗಳ ಚುನಾವಣೆ ಡೇಟ್ ಅನೌನ್ಸ್: ಏಪ್ರಿಲ್ 9ರಿಂದ ಮತದಾನ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಭಾರತದ ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, ಮತದಾನ ಏಪ್ರಿಲ್ 9ರಿಂದ ಆರಂಭವಾಗಿ ಏಪ್ರಿಲ್ 29ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚುನಾವಣೆಗಳು ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿಗಳಲ್ಲಿ ನಡೆಯಲಿವೆ. ಇದರಲ್ಲಿ ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಉಳಿದ ರಾಜ್ಯಗಳು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ:

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಒಟ್ಟು ಐದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸುಮಾರು 17.4 ಕೋಟಿ ಮತದಾರರು ತಮ್ಮ ಮತದಾನ ಹಕ್ಕನ್ನು ಚಲಾಯಿಸಲಿದ್ದಾರೆ..

ಈ ಚುನಾವಣೆಗಾಗಿ ಸುಮಾರು 2.19 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಸುಮಾರು 25 ಲಕ್ಷ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಚುನಾವಣಾ ದಿನಾಂಕಗಳ ಘೋಷಣೆಯೊಂದಿಗೆ ಇಂದಿನಿಂದಲೇ ಮಾದರಿ ನಡವಳಿ ಸಂಹಿತೆ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !