Sunday, December 28, 2025

ಚುನಾವಣಾ ಫಿಕ್ಸ್! 3 ತಿಂಗಳಲ್ಲಿ ಜಿ.ಪಂ, ತಾ.ಪಂ ಸಮರಕ್ಕೆ ಸಜ್ಜಾಗುವಂತೆ ಡಿಕೆಶಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಎರಡು-ಮೂರು ತಿಂಗಳೊಳಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಜ್ಜಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಲಾಗಿದ್ದು, ನ್ಯಾಯಾಲಯದಲ್ಲಿರುವ ಮೀಸಲಾತಿ ಗೊಂದಲಗಳನ್ನು ಬಗೆಹರಿಸಿ ಶೀಘ್ರವೇ ಚುನಾವಣೆ ನಡೆಸಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಮನ್ರೇಗಾ ಹೆಸರು ಬದಲಾವಣೆಯ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ ಅವರು, 2026ರ ಜನವರಿ 5 ರಿಂದ ಪಂಚಾಯತ್ ಮಟ್ಟದಿಂದ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದರು. ಗ್ಯಾರಂಟಿ ಸಮಿತಿ ಹಾಗೂ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರು ಈ ಹೋರಾಟದ ಜವಾಬ್ದಾರಿ ಹೊರಬೇಕು ಎಂದು ಅವರು ಸೂಚಿಸಿದರು.

error: Content is protected !!