ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬೆಂಗಳೂರಿನಲ್ಲೇ ರಾಹುಲ್ ಗಾಂಧಿ ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇದೇ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಬೆಂಗಳೂರಿನಲ್ಲೇ ಮತದಾನ ಮಾಡಲಿದ್ದಾರೆ.
ಕರ್ನಾಟಕದಲ್ಲಿ ಭಾರತ್ ಜೋಡೊ ಯಾತ್ರೆ ನಡೆಸಲಿರುವ ರಾಹುಲ್‌ ಅ.17 ಮತದಾನಕ್ಕಾಗಿ ದೆಹಲಿಗೆ ಹೋಗುವ ಬದಲು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಮತಗಟ್ಟೆಯಲ್ಲೇ ಮತದಾನ ಮಾಡಲಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮತಗಟ್ಟೆಸ್ಥಾಪಿಸುವ ಹಾಗೂ ರಾಹುಲ್‌ ಗಾಂಧಿ ಅವರ ಮತದಾನಕ್ಕೆ ಪೂರಕವಾದಂತಹ ವ್ಯವಸ್ಥೆ ರೂಪಿಸುವ ಬಗ್ಗೆ ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸಹ ಮಾಡಲಾಗಿದೆ. ಅಕ್ಟೋಬರ್ 17ಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ಕ್ಕೆ ಮತ ಎಣಿಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!