ಲೋಕಸಭಾ ಸ್ಪೀಕರ್‌ ಸ್ಥಾನಕ್ಕೆ ಚುನಾವಣೆ, ಇಬ್ಬರಿಂದ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

72 ವರ್ಷಗಳಲ್ಲಿ ಮೂರನೇ ಬಾರಿಗೆ ಲೋಕಸಭಾ ಸ್ಪೀಕರ್‌ ಸ್ಥಾನಕ್ಕೆ ಚುನಾವಣೆ, ಇಬ್ಬರಿಂದ ನಾಮಪತ್ರ ಸಲ್ಲಿಕೆಯಾಗಿದೆ.

ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ I.N.D.I.A ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ I.N.D.I.A ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದೀಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!