ಹೊಸದಿಗಂತ ವರದಿ ಬೆಂಗಳೂರು:
ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಶೇ. 46.04ರಷ್ಟು ಮತದಾನವಾಗಿದೆ.
ಮತದಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 3,193 ಮತದಾರರು ನೋಂದಾಯಿಸಿಕೊಂಡಿದ್ದು, ಮದ್ಯಾಹ್ನ 12 ಗಂಟೆಯವರೆಗೆ 1,470 ಮಂದಿ ಮತ ಚಲಾಯಿಸಿದ್ದಾರೆ. ಇದರಲ್ಲಿ 770 ಪುರುಷರು ಹಾಗೂ 700 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.



