ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಚ ರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸಗಢ, ಮಿಜೋರಾಂ, ರಾಜಸ್ಥಾನ ಹಾಗೂ ತೆಲಂಗಾಣದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ₹1,760 ಕೋಟಿ ಮೌಲ್ಯದ ಡ್ರಗ್ಸ್ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ.
ಮತದಾರರನ್ನು ಪ್ರೇರೇಪಿಸುವ ಉದ್ದೇಶದಿಂದ ಹಂಚಲು ಉದ್ದೇಶಿಸಲಾಗಿದ್ದ ನಗದು, ಮದ್ಯ ಮತ್ತು ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಆಯೋಗ ಹೇಳಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಶಪಡಿಸಿಕೊಂಡ ಪ್ರಮಾಣಕ್ಕಿಂತ 7 ಪಟ್ಟು (₹239.15 ಕೋಟಿ) ಹೆಚ್ಚಾಗಿದೆ ಎಂದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಅ.9ರಂದು ಚುನಾವಣೆ ಘೋಷಣೆಯಾಗಿತ್ತು. ಮಧ್ಯಪ್ರದೇಶ, ಛತ್ತೀಸಗಢ ಮತ್ತು ಮಿಜೋರಾಂನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದಿದೆ. ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನ.25 ಮತ್ತು ನ.30ರಂದು ಮತದಾನ ನಡೆಯಲಿದೆ. ಡಿ.3ರಂದು ಈ ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.