Saturday, December 2, 2023

Latest Posts

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಮುಂದಿನ ಶುಕ್ರವಾರ(ನವೆಂಬರ್ 17) ಕೇಂದ್ರದಿಂದ ವೀಕ್ಷರು ರಾಜ್ಯಕ್ಕೆ ಆಗಮಿಸುತ್ತಾರೆ. ಇದೇ ದಿನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲಾ ನಾಯಕರು, ಹಿರಿಯರ ಅಭಿಪ್ರಾಯ ಸಂಗ್ರಹಿಸಿ ವಿಪಕ್ಷ ನಾಯಕನ ಆಯ್ಕೆ ಅಂತಿಮಗೊಳಿಸಲಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಯಡಿಯೂರಪ್ಪನ ಮಗ ಎನ್ನುವ ಕಾರಣಕ್ಕೆ ನನಗೆ ಈ ಪೋಸ್ಟ್ ಕೊಟ್ಟಿಲ್ಲ. ಯಡಿಯೂರಪ್ಪ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬೀಡುವ ಯೋಚನೆಯಲ್ಲಿ ಇರೋರನ್ನು ಒಟ್ಟಿಗೆ ತಗೊಂಡು ಹೋಗುತ್ತೇನೆ. ದೆಹಲಿಯಿಂದ ವೀಕ್ಷಕರು ಬರಲಿದ್ದಾರೆ. ಸೋಮಣ್ಣ ಅಶೋಕ್ ಯತ್ನಾಳ್ ಬೊಮ್ಮಾಯಿ ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!