ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಗೊಂದಲ ನಡುವೆ ಬಿಜೆಪಿ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ಅವರನ್ನು ಸೋಮವಾರ ಶಾಸಕಾಂಗ ಪಕ್ಷದ ನಾಯಕನ ಚುನಾವಣೆಗೆ ವೀಕ್ಷಕರಾಗಿ ನೇಮಿಸಲಾಗಿದೆ.
ಮಂಗಳವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು? ಎಂಬುದು ತಿಳಿಯಲಿದೆ.
ಸೋಮವಾರ ಬಿಜೆಪಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವೀಕ್ಷಕರನ್ನು ನೇಮಕ ಮಾಡಿದೆ. ಬಿಜೆಪಿ ಈಗಾಗಲೇ ಡಿಸೆಂಬರ್ 5 ರಂದು ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂದು ಘೋಷಣೆ ಮಾಡಿದೆ. ಶಾಸಕರ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.