ಹೊಸ ದಿಗಂತ ವರದಿ, ಕುಷ್ಟಗಿ:
ದಸರಾ ಬಳಿಕ ಬಿಜೆಪಿ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಲಿಂಗಸುಗೂರಿನಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ ನೇತೃತ್ವದಲ್ಲಿ ನಡೆಯುತ್ತಿರುವ ಶರನ್ನವರಾತ್ರಿ ದಸರಾ ದರ್ಬಾರ ಧರ್ಮ ಸಮ್ಮೆಳನದಲ್ಲಿ ಭಾಗವಹಿಸಲು ಕುಷ್ಟಗಿ ಮಾರ್ಗವಾಗಿ ತೆರಳುತ್ತಿರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರೈತರ ಕೃಷಿ ಪಂಪಸೆಟ್ ಗಳಿಗೆ ನಿರಂತರ 7 ತಾಸು ವಿದ್ಯುತ್ ಪೂರೈಸಲು ಕಾಂಗ್ರೆಸ್ ಸರ್ಕಾರ ಅಸಮರ್ಥವಾಗಿದೆ. ರೈತರೊಂದಿಗೆ ಕಣ್ಣಾ ಮುಚ್ಚಾಲೆಯಾಟ ಆಡುತ್ತಿದೆ. ರಾಜ್ಯಾದಾದ್ಯಂತ ಕಾಂಗ್ರೆಸ್ ಧೋರಣೆ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.