ಬಿಜೆಪಿಯಲ್ಲಿ ಕಗ್ಗಂಟಾಗಿದೆ ವಿಪಕ್ಷ ನಾಯಕನ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಇದೀಗ ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ನೂತನ ಸರ್ಕಾರದ ಮುಖ್ಯಮಂತ್ರಿ ಸ್ಥಾನದ ಆಯ್ಕೆಗಾಗಿ ಎಷ್ಟು ದಿನಗಳು ಬೇಕಾಯ್ತೋ ಅದಕ್ಕಿಂತ ಹೆಚ್ಚು ದಿನಗಳು ಈ ಆಯ್ಕೆ ಪ್ರಕ್ರಿಯೆಗೆ ಬೇಕಾಗುವ ಎಲ್ಲಾ ಸಾಧ್ಯತೆಗಳಿವೆ.

ನೂತನ ಸರ್ಕಾರ ಅಸ್ಥಿತ್ವಕ್ಕೆ ಬಂದು ನಾಲ್ಕು ದಿನಗಳಾದರೂ ವಿಪಕ್ಷ ನಾಯಕ ಯಾರು ಎನ್ನುವ ಸುಳಿವೂ ಇಲ್ಲದಂತಾಗಿದೆ. ಇಲ್ಲಿಯೂ ಹೈಕಮಾಂಡ್ ಪ್ರವೇಶಕ್ಕೆ ರಾಜ್ಯ ಬಿಜೆಪಿ ನಾಯಕರು ಕಾಯುತ್ತಿದ್ದಾರೆ ಎನ್ನುವ ಪ್ರಶ್ನೆ ಎದುರಾಗಿದೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸುಮಿಲ್ ಕುಮಾರ್ ಹಾಗೂ ಯತ್ನಾಳ್ ಹೆಸರು ವಿಪಕ್ಷ ನಾಯಕನ ರೇಸ್‌ನಲ್ಲಿ ಕೇಳಿಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!