ನಾಳೆ ‘ವಿಧಾನಪರಿಷತ್ ಉಪಸಭಾಪತಿ’ ಚುನಾವಣೆ : ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಡಿಸೆಂಬರ್ 23 ರಂದು ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.

ಪರಿಷತ್ ನ ಮುಖ್ಯಸಚೇತಕ ನಾರಾಯಣ ಸ್ವಾಮಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದು, ಉಪ ಸಭಾಪತಿ ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗೆ ಮತ ನೀಡುವಂತೆ ಹಾಗೂ ನಾಳೆ ಬೆಳಗ್ಗೆ 10 ಗಂಟೆಗೆ ಹಾಜರಿರುವಂತೆ ಸೂಚನೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಕಲಾಪದಲ್ಲಿಯೇ ನೂತನ ಉಪ ಸಭಾಪತಿಗಳ ಆಯ್ಕೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!