ರಾಜ್ಯದಲ್ಲಿ ರಂಗೇರಿದ ಚುನಾವಣೆ ಸಿದ್ಧತೆ: ಭಾನುವಾರ ಅಮಿತ್‌ ಶಾ ಆಗಮನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಗೆಲುವಿಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ.
ಇನ್ನು ಕೂಡ ಮತ್ತೆ ಅಧಿಕಾರಕ್ಕೇರಲು ರಣತಂತ್ರ ರೂಪಿಸುತ್ತಿದ್ದು, ಈಗಾಗಲೇ ಪ್ರಧಾನಿ ಮೋದಿ ಅವರು ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಇದೀಗಗೃಹಸಚಿವ ಅಮಿತ್‌ ಶಾ (Amit Shah) ಎರಡು ದಿನದ ಕರ್ನಾಟಕ ಪ್ರವಾಸಕ್ಕೆ ಶನಿವಾರ ಆಗಮಿಸಲಿದ್ದಾರೆ.

ಅಮಿತ್ ಶಾ ಅವರು ಇದೇ ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಇರುತ್ತಾರೆ. 28ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಹುಬ್ಬಳ್ಳಿಗೆ ಬಂದಾಗ ಅಭೂತಪೂರ್ವ 8 ಕಿಮೀ ರೋಡ್ ಷೋ ನಡೆದಿತ್ತು.

ಶಾ , 28ರಂದು ಬೆಳಿಗ್ಗೆ ಹುಬ್ಬಳ್ಳಿಯ ಕೆ.ಎಲ್.ಇ. ಸೊಸೈಟಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಳಾಂಗಣ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಹುಬ್ಬಳ್ಳಿ ಬಿವಿಬಿ ಕಾಲೇಜಿನ ಮೈದಾನದಲ್ಲಿ ಕೆಎಲ್‍ಇ ಸೊಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಧಾರವಾಡದ ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ ಸೆಂಟರ್‍ನ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ .

ಇದೇ ವೇಳೆ ಕುಂದಗೋಳದಲ್ಲಿ 300 ವರ್ಷಗಳ ಹಿಂದೆ ನಿರ್ಮಿಸಿದ ಪುರಾತನ ಶಂಭುಲಿಂಗ ದೇವಸ್ಥಾನಕ್ಕೆ ಮಧ್ಯಾಹ್ನ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ನಂತರ ಬಸವಣ್ಣ ದೇವರ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಕುಂದಗೋಳದ ವಾರ್ಡ್ ನಂಬರ್ 7ರ ಬೂತ್ ಸಂಖ್ಯೆ 50ರಲ್ಲಿ ವಾಲ್ ಪೇಂಟಿಂಗ್ ಮಾಡುವ ಮೂಲಕ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸುವರು. ಬಳಿಕ ಬಹುದೊಡ್ಡ ರೋಡ್ ಷೋದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ ಬೆಳಗಾವಿಯ ಕಿತ್ತೂರು ಕ್ಷೇತ್ರದ ವೀರ ಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪದ ಬಳಿಯ ಮೈದಾನದಲ್ಲಿ ಜನಸಂಕಲ್ಪ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡುವರು. ಬೆಳಗಾವಿಯಲ್ಲಿ ಹಿರಿಯರ ಜೊತೆ ಸಂವಾದ ನಡೆಸುವರು. ಅಲ್ಲದೆ, ಸಂಘಟನಾತ್ಮಕ ಸಭೆಯಲ್ಲೂ ಭಾಗವಹಿಸುವರು. ಬಸವರಾಜ ಬೊಮ್ಮಾಯಿ, ನಳಿನ್‍ಕುಮಾರ್ ಕಟೀಲ್, ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತಿತರ ಮುಖಂಡರು ಪಕ್ಷದ ವಿವಿಧ ಸಭೆಗಳಲ್ಲಿ ಭಾಗವಹಿಸಲಿದ್ದಾರೆ .

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!