Tuesday, February 27, 2024

ಚುನಾವಣಾ ರಿಸಲ್ಟ್: ಜಾತಿ ಗಣತಿಗೆ ಹೊರಟ ಕಾಂಗ್ರೆಸ್ ಗೆ ಬಿತ್ತೇ ಸೋಲಿನ ಏಟು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಚಿತ್ತ ಇದೀಗ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದತ್ತ ನೆಟ್ಟಿದ್ದು, (Congress) ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ರಾಜ್ಯಗಳ ಚುನಾವಣೆ ಫಲಿತಾಂಶ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ನೀಡಿದೆ.

ದೇಶಾದ್ಯಂತ ಜಾತಿ ಗಣತಿ ಮಾಡುವುದಾಗಿ ಕಾಂಗ್ರೆಸ್‌ ಹೇಳಿ ಈ ಬಾರಿ ಚುನಾವಣಾ ಅಖಾಡಕ್ಕೆ ಇಳಿದಿದ್ದು, ಸ್ವತ: ರಾಹುಲ್‌ ಗಾಂಧಿಯಾಗಿ (Rahul Gandhi) ಕಾಂಗ್ರೆಸ್‌ ನಾಯಕರು ನಮ್ಮ ಸರ್ಕಾರ ಆಡಳಿತಕ್ಕೆ ಬಂದರೆ ದೇಶಾದ್ಯಂತ ಜಾತಿ ಗಣತಿ ಮಾಡುತ್ತೇವೆ ಎಂದು ಘೋಷಿಸಿದ್ದರು.

ಆದ್ರೆ ಕಾಂಗ್ರೆಸ್ ಘೋಷಣೆಗಳೇ ಸೋಲಿಗೆ ಮುಳುವಾಯಿತಾ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರ ಬಿಂದು ಆಗಿದೆ.

ಸದ್ಯ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಇದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!