ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಉತ್ತರ ಪ್ರದೇಶದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಹೆಚ್ಚು ಗಮನ ಸೆಳೆದಿದ್ದಾರೆ. .
ಅಯೋಧ್ಯೆ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ನಿಂತಿದ್ದ ಸಮಾಜವಾದಿ ಪಕ್ಷದ ಅವದೇಶ್ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದಾರೆ.